Mysore
26
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ನೀಟ್‌ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸುಬೋದ್ ಕುಮಾರ್‌

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದ್ದನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಮುಖ್ಯಸ್ಥ ಸುಬೋದ್‌ ಕುಮಾರ್‌ ತಳ್ಳಿಹಾಕಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ ಮಾಡಿದ್ದು, ನೀಟ್‌ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದು, ವೈದ್ಯಕೀಯ ಪರೀಕ್ಷೆಯ ಸಮಗ್ರತೆಗೆ ದೇಶದಲ್ಲಿ ಎಲ್ಲಿಯೂ ರಾಜೀಯಾಗಿಲ್ಲ ಎಂದು ಅವರು ಹೇಳಿದರು.

ಈ ಸಂಬಂದ ಪಿಐಬಿ ಟ್ವೀಟ್‌ ಮಾಡಿದ್ದು, ನೀಟ್ ಪರೀಕ್ಷೆಯ ವಿಷಯವು 6 ಕೇಂದ್ರಗಳು ಮತ್ತು 1600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ನಾವು ತಜ್ಞರ ಸಮಿತಿಯನ್ನು ರಚಿಸಿ, ಸಮಸ್ಯೆಯನ್ನು ವಿಶ್ಲೇಷಿಸಿದ್ದೇವೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಿದ್ದೇವೆ

ವಿಶೇಷವಾಗಿ 1600 ಅಭ್ಯರ್ಥಿಗಳು ಮತ್ತು ಇತರ 23 ಲಕ್ಷ ಅಭ್ಯರ್ಥಿಗಳ ಭಯವನ್ನು ಹೋಗಲಾಡಿಸಲು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಉನ್ನತ ಅಧಿಕಾರದ ಸಮಿತಿಯು ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳನ್ನು ವಿಶ್ಲೇಷಿಸಲು ನಿರ್ಧರಿಸಿದೆ. ಆ ಮೂಲಕ, ಎಲ್ಲಾ ಸಮಸ್ಯೆಗಳನ್ನು ಮತ್ತೊಮ್ಮೆ ಪರಿಹರಿಸಲು ಮುಂದಾಗಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾದ ಸುಬೋಧ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಬರೆದುಕೊಂಡಿದೆ.

https://x.com/PIB_India/status/1799375799436640303

Tags: