Mysore
25
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಮಂತ್ರಿ ಭಾಗ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್‌ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಮಂತ್ರಿ ಭಾಗ್ಯ ದೊರಕುವುದು ಬಹುತೇಕ ಖಚಿತವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ ಕುಮಾರಸ್ವಾಮಿ, ತುಮಕೂರ ಕ್ಷೇತ್ರದ ಸಂಸದ ವಿ.ಸೋಮಣ್ಣ ಹಾಗೂ ರಾಜ್ಯಸಭಾ ಸದಸ್ಯರಾದ ನಿರ್ಮಲ ಸೀತಾರಾಮನ್‌  ಅವರ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿವೆ.

ಅದರಲ್ಲಿ ಪ್ರಹ್ಲಾದ್‌ ಜೋಶಿ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆಯ ಖಾತೆ ಹಾಗೂ ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣಗೆ ರಾಜ್ಯ ಖಾತೆ ಸಿಗಲಿದೆ ಎಂದು ತಿಳಿದು ಬಂದಿದೆ.

Tags:
error: Content is protected !!