Mysore
36
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಭಾಗವಹಿಸಲಿರುವ ಖರ್ಗೆ

ನವದೆಹಲಿ: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ ವರದಿ ಮಾಡಿದೆ.

ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಶನಿವಾರ(ಜೂ.8) ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಾರೆ ಎಂದು ವರದಿಯಾಗಿತ್ತು. ಅಲ್ಲಿಯವರೆಗೆ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ಬಂದಿರಲಿಲ್ಲ.

ಇಂದು ರಾತ್ರಿ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Tags:
error: Content is protected !!