ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್ ಕಸ್ಟ್‌ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್ ಅವರನ್ನು ಬಂಧಿಸಲಾಗಿತ್ತು.
ದರ್ಶನ್ ಸೇರಿದಂತೆ 17ಮಂದಿ ಆರೋಪಿಗಳನ್ನು ಪೊಲೀಸ್ ವಿಚಾರಣೆಗೆ ಒಳಪಡಿಸಿದ ಬಳಿಕ ಆರೋಪಿಗಳನ್ನು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಯಿತು. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಬಂದ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.
ಪ್ರಕರಣದ ಸಂಬಂಧ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟ್‌ಡಿಗೆ ನೀಡುವಂತೆ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್ ಆದೇಶ ನೀಡಿದ್ದಾರೆ.