Mysore
23
light rain

Social Media

ಭಾನುವಾರ, 22 ಫೆಬ್ರವರಿ 2026
Light
Dark

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಇಬ್ಬರ ವಿದ್ಯಾರ್ಥಿಗಳ ಸಾವು

ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಬಿಡದಿ ಹೊರವಲಯದಲ್ಲಿ ಶುಕ್ರವಾರ(ಜೂ.14) ರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಾದ ವಿಶ್ವ(21), ಸೂರ್ಯ(21) ಮೃತಪಟ್ಟವರು. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ಬರುವಾಗ ಶುಕ್ರವಾರ ರಾತ್ರಿ 12;30 ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಶವಗಳನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:
error: Content is protected !!