Mysore
19
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಸೇಡಿನ ರಾಜಕಾರಣ ಮಾಡುವುದು ಬಿಜೆಪಿ ಕೆಲಸ: ಸಿಎಂ ಸಿದ್ದರಾಮಯ್ಯ

ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು ಎಚ್‌ಡಿಕೆ ಅವರನ್ನು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಎಚ್‌ಡಿ ಕುಮಾರಸ್ವಾಮಿಯನ್ನು ಟೀಕಿಸಿದರು.

Tags:
error: Content is protected !!