ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆ ಕಾರಣಕ್ಕಾಗಿಯೇ ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ದರ್ಶನ್‌ರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಾಸ್ಯನಟ ಚಿಕ್ಕಣ್ಣನಿಗೆ ಅನ್ನಪೂರ್ಣೇಶ್ವರಿ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಟ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗುವ ಮುನ್ನ ಸ್ಟೋನಿಬ್ರೂಕರ್ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯ ಮಧ್ಯ ಸ್ವಲ್ವ ಕೆಲಸ ಇದೆ ಅಂತಾ ದರ್ಶನ್ ಎದ್ದು ಹೊರಟು, ತೆರಳಿದ್ದು ಪಟ್ಟಣಗೆರೆ ಶೆಡ್‌ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಕೊಲೆ ವಿಚಾರವಾಗಿ ಪಾರ್ಟಿಯಲ್ಲಿ ಏನಾದ್ರು ಚರ್ಚೆಯಾಗಿತ್ತಾ ಅಂತಾ ಮಾಹಿತಿ ಪಡೆಯುವ ಸಾಧ್ಯತೆಯಿದ್ದು, ಇಂದು ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.