ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಸೋಮವಾರ (ಜೂನ್.17) ಎಸ್‌ಐಟಿ ತನಿಖಾಧಿಕಾರಿಗಳ ಎದುರು ಹಾಜರಾದರು.
ಕಚೇರಿಗೆ ಬಂದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದರು. ತನಿಖೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗಿದ್ದು, ಅವರು ನೀಡಿದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಶಾಸಕ ಎಚ್.ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮೇ.4 ರಂದು ಬಂಧಿಸಲಾಗಿತ್ತು. ಮರು ದಿನವೇ ನ್ಯಾಯಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿದು, ಸೋಮವಾರ ಎಸ್‌ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ.