Mysore
30
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಇದೊಂದು ಅತ್ಯಂತ ಹೇಯ ಮತ್ತು ಹೀನ ಕೃತ್ಯ: ಪೊಲೀಸ್‌ ಆಯಕ್ತ ಬಿ.ದಯಾನಂದ್‌

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ್‌ ಹೇಳಿದರು.

ಮಂಗಳವಾರ (ಜೂನ್‌.18) ಮಾಧ್ಯಮಗಳೊಂದಿಗೆ ಮಾತನಾಡಿ, ಪೊಲೀಸರ ನಿಷ್ಪಕ್ಷಪಾತ ಹಾಗೂ ಸಮಯಪ್ರಜ್ಞೆಯಿಂ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಪ್ರಕರಣವನ್ನು ಬೇರೆ ದಿಕ್ಕಿಗೆ ಬದಲಾಯಿಸಲಾಗುತ್ತಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ಮಾಹಿತಿ ಕಲೆ ಹಾಕುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಮೃತ ವ್ಯಕ್ತಿಯನ್ನು ಅತ್ಯಂತ ದೌರ್ಜನ್ಯಯುತವಾಗಿ ಹತ್ಯೆ ಮಾಡಲಾಗಿದೆ ಎಂದು ದಯಾನಂದ್‌ ಮಾಹಿತಿ ನೀಡಿದರು.

ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿಯ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸುವ ವೇಳೆ ಸಮರ್ಪಕ ದಾಖಲೆಗಳನ್ನು ಒದಗಿಸಿ ಮೃತ ರೇಣುಕಾಸ್ವಾಮಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಯಾನಂದ್‌ ಹೇಳಿದರು.

Tags: