ಪಾಟ್ನಾ: ಬಿಹಾರದ ಅರಾರಿಯಾದಲ್ಲಿ 12 ಕೋಟಿ ವೆಚ್ಚದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಈ ವಿಡಿಯೊವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತಗೊಂಡ ಕಾರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಯೊಂದಿಗೆ ವೈರಲ್ ಆಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಿಕ್ತಿ ಶಾಸಕ ವಿಜಯ್ ಕುಮಾರ್ ಸೇತುವೆ ನಿರ್ಮಿಸಿದ ನಿರ್ಮಾಣ ಕಂಪೆನಿಯ ಮಾಲೀಕರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ, ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದಿದ್ದಾರೆ.