Mysore
16
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು : ಡಾ. ಪಿ.ಶಿವರಾಜು

ಮೈಸೂರು : ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ ನಡೆದ ಜಿಲ್ಲಾ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದ 24 ಗಂಟೆಯ ಒಳಗೆ ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಮಿತಿಯವರು ಆ ಸ್ಧಳಕ್ಕೆ ಭೇಟಿ ಮಾಡಿ ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ಅರ್ಹ ರೈತ ಕುಟುಂಬಕ್ಕೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯಗಳಾದ ಮೃತ ರೈತರ ಪತ್ನಿಗೆ 2000 ರೂ.ಗಳ ಮಾಸಾಶನ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಹಾಗೂ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ, ಜಿಲ್ಲಾ ಸಹಕಾರ ನಿಬಂಧಕರು,ಜಿಲ್ಲಾ ವೈಧ್ಯಾಧಿಕಾರಿಗಳು,ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

Tags:
error: Content is protected !!