Mysore
24
scattered clouds

Social Media

ಬುಧವಾರ, 15 ಜನವರಿ 2025
Light
Dark

ವಿ.ಸಿ. ನಾಲೆ ಆಧುನೀಕರಣ ಕಾಮಗಾರಿಯ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ 300 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ವಿ.ಸಿ.ಮುಖ್ಯ ನಾಲೆ ಆಧುನೀಕರಣ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಇಂದು (ಜೂ. 19) ಕೆ‌ಆರ್‌ಎಸ್ ಹೋಟೆಲ್ ಮಯೂರಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿ.ಸಿ ನಾಲೆಯ ಕಾಮಗಾರಿ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ವಿಶ್ವೇಶ್ವರಯ್ಯ ನಾಲೆಯು ಕೃಷ್ಣರಾಜ ಜಲಾಶಯದ ಎಡದಂಡೆಯಿಂದ ಪ್ರಾರಂಭಗೊಳ್ಳುತ್ತದೆ. ಈ ನಾಲೆಯ ಕಾಮಗಾರಿಯು ಸುಮಾರು 1931 ರಲ್ಲಿ ಪೂರ್ಣಗೊಂಡಿದೆ. ಇದೀಗ ಈ ನಾಲೆಗೆ ಆಧುನೀಕರಣ ಕಾಮಗಾರಿ ಕೈಗೊಂಡಿದ್ದು, 40 ಕಿ.ಮೀ ನಲ್ಲಿ 24 ಕಿ.ಮೀ ಪೂರ್ಣಗೊಂಡಿ, 4 ಕಿ.ಮೀ ಪ್ರಗತಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಸಚಿವರು ಕೆ.ಆರ್.ಎಸ್ ನಿಂದ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನಸಭಾ ಶಾಸಕರಾದ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿ ಕುಮಾರ್, ವಿಧಾನ ಪರಿಷತ್ ಶಾಸಕ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಕಾ.ನೀ.ನಿ.ನಿ ಅಧೀಕ್ಷಕ ಇಂಜಿನಿಯರ್ ರಘುರಾಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: