Mysore
19
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ; ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲಾ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಅಂದ್ರೆ, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಿಸದಂತೆ ಆದೇಶ ಹೊರಡಿಸಿದೆ.

ಗಣ್ಯ ವ್ಯಕ್ತಿಗಳು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಿಕೊಳ್ಳುತ್ತಾರೆ. ಇದರಿಂದ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ನಮ್ಮ ಹುಟ್ಟುಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗ್ತಿಲ್ಲ ಎಂದು ಬೇಜಾರಾಗುತ್ತೆ.
ಈ ಎಲ್ಲಾ ಬೆಳವಣಿಗೆಗಳಿಂದ ಮಕ್ಕಳ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಆದೇಶ ಹೊರಡಿಸಲಾಗಿದೆ ಅಂತಾ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಒಟ್ಟಾರೆಯಾಗಿ ರಾಜ್ಯ ಸರ್ಕಾರದ ಈ ಆದೇಶವನ್ನು ಎಲ್ಲಾ ಶಾಲೆಗಳು ಅನುಸರಿಸಲೇಬೇಕು. ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸದಿದ್ದಲ್ಲಿ ಅಂತಹ ಶಾಲೆ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Tags:
error: Content is protected !!