ಜಮ್ಮು ಕಾಶ್ಮೀರಾ: ಶ್ರೀನಗರದ ದಾಲ್ ಸರೋವರ ತಟದ ಶೇರ್-ಐ-ಕಾಶ್ಮೀರ್ ಅಂತರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ಶುಕ್ರವಾರ (ಜೂ.21) ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಈ ವೇಳೆ 7 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಪ್ರಧಾನಿ ಮೋದಿ ಅವರು ಯೋಗ ಮಾಡಿದರು.
ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರಾಕ್ಕೆ ಭೇಟಿ ನೀಡಿ ಇಂದು ನಡೆದ ಯೋಗ ದಿನಾಚಣೆಯಲ್ಲಿ ಪಾಲ್ಗೊಂಡಿದ್ದಾರೆ.
ಯೋಗ ದಿನಾಚರಣೆ ಕಾರ್ಯಕ್ರಮ ಮುಗಿದ ಬಳಿಕ ಜಮ್ಮು ಕಾಶ್ಮೀರಕ್ಕೆ ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ವಿವಿಧ 1500 ಕೋಟಿ ರೂ. ಯೋಜನಗೆಳಿಗೆ ಮೋದಿ ಚಾಲನೆ ನೀಡಲಿದ್ದಾರೆ.