Mysore
21
broken clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ತಮಿಳುನಾಡು| ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 50ಕ್ಕೆ ಏರಿಕೆ

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ.

ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತು ಅವರ ಆರೋಗ್ಯದ ಮೇಲೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದದಾರೆ ಎಂದು ಅವರು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜೂನ್‌.19ರಂದು ಕಲ್ಲಕುರಿಚಿಯಲ್ಲಿ ನಕಲಿ ಮದ್ಯಸೇವನೆಯಿಂದ 50 ಮಂದಿ ಮೃತರಾಗಿದ್ದು, ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ ಸ್ಟಾಲಿನ್‌ ಸರ್ಕಾರ.

Tags:
error: Content is protected !!