Mysore
18
mist

Social Media

ಮಂಗಳವಾರ, 24 ಡಿಸೆಂಬರ್ 2024
Light
Dark

ಸೂರಜ್ ವಿರುದ್ಧದ ಆರೋಪಕ್ಕೆ ಸಂಬಂಧಪಟ್ಟಂತೆ ಯಾವುದೇ ದೂರು ದಾಖಲಾಗಿಲ್ಲ: ಪರಮೇಶ್ವರ್‌

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.

ಆದರೆ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನು ಎಂಬುದಾಗಿ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ. ತನಿಖೆಯನ್ನು ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆಯನ್ನ ತಿಳಿದುಕೊಳ್ಳುತ್ತೇವೆ. ಅಧಿಕೃತವಾಗಿ ಸೂರಜ್ ವಿರುದ್ಧ ದೂರು ಬಂದಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹೀಗಾಲೇ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಈ ಸಂದರ್ಭದಲ್ಲಿಯೇ ಪ್ರಜ್ವಲ್‌ ಸಹೋದರ ಸೂರಜ್ ರೇವಣ್ಣ ವಿರುದ್ಧವೂ ಆರೋಪ ಕೇಳಿಬಂದಿದ್ದು ಸಾಕಷ್ಟು ಸದ್ದುಮಾಡುತ್ತಿದೆ.

Tags: