Mysore
19
few clouds

Social Media

ಮಂಗಳವಾರ, 20 ಜನವರಿ 2026
Light
Dark

ಕಮಲ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ(89) ಅವರು ಇಂದು(ಜೂ.22) ಬೆಳಗಿನ ಜಾವ ಹೃದಯಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದು, ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ ಎಂದರು.

ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ ಎಂದು ಹೇಳಿದರು.

ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Tags:
error: Content is protected !!