ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ.
ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಸಹ ಮುಂಡೂಡಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ವಂಚನೆಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಬಿಹಾರ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಯುತ್ತಿದ್ದು, ಬಿಹಾರದ ಆರೋಪಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪೊಪ್ಪೊಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಯುಜಿಸಿ-ನೀಟ್ ಪ್ರಕರಣದ ಸಮಗ್ರ ತನಿಖೆ ಮಾಡಲು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ತಿಳಿಸಿದೆ.