Mysore
26
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಸೂರಜ್‌ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್‌. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 92/2024 ಅನ್ನು ಮುಂದಿನ ತನಿಖೆಗಾಗಿ ತಕ್ಷಣದಿಂದಲೇ ಸಿಐಡಿಗೆ ವಹಿಸಲಾಗಿದೆ. ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಹಾಸನ ಎಸ್‌ಪಿ ಅವರು, ಈ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗೆ ಕಡತಗಳನ್ನು ಸಿಐಡಿಗೆ ಖುದ್ದಾಗಿ ಹಸ್ತಾಂತರ ಮಾಡಲು ಸೂಚನೆ ನೀಡಬೇಕು. ಸಿಐಡಿ ಡಿಜಿಪಿ ಪ್ರಕರಣದ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೂ ಸಹ ಸೂಚಿಸಿದ್ದಾರೆ.

Tags:
error: Content is protected !!