ಹುಣಸೂರು: ಸರಣಿ ಅಪಘಾತ ಸಂಭವಿಸಿದ ಪರಿಣಾಮ ಆರು ಕಾರುಗಳು ಜಖಂಗೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದ ಬಳಿ ನಡೆದಿದೆ.
ಒಂದರ ಹಿಂದೆ ಒಂದರಂತೆ ಬಂದ ಆರು ಕಾರುಗಳು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಇದ್ದ ಕಾರು ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಜಖಂ ಆಗಿವೆ. ವೀಕೆಂಡ್ ರಜೆಯ ಹಿನ್ನೆಲೆಯಲ್ಲಿ ಇಂದು ಪ್ರವಾಸಿಗರು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.





