Mysore
23
broken clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಮುಂಗಾರು ಚುರುಕು: ರಾಜ್ಯದ ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇತ್ತ ಚಾಮರಾಜನಗರ, ಮೈಸೂರು, ಧಾರವಾಡ, ದಾವಣಗೆರೆ, ಮಂಡ್ಯ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇನ್ನುಳಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಆರೆಂಜ್‌ ಅಲರ್ಟ್‌ ಆಗಿರಲಿದೆ.

Tags:
error: Content is protected !!