ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್ ಕೊಟ್ಟಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಹೇಳಿದರು.
ಅಲ್ಲದೆ ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡುತ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.