Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು

ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್‌ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ.

2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ್ದ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಈ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಮತ್ತು ಧಾರ್ಮಿಕ ಸಂಘಟನೆಗಳು ಕೂಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ಪರಮೇಶ್ ಉದಯನಿಧಿ ಸ್ಟಾಲಿನ್ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ನೋಟಿಸ್ ಜಾರಿ ಮಾಡಿದ ನಂತರ ಉದಯನಿಧಿ ಸ್ಟಾಲಿನ್ ಹಾಜರಾಗಿದ್ದರು. ತಮಿಳುನಾಡಿನ ಕ್ರೀಡಾ ಮತ್ತು ಯುವ ವ್ಯವಹಾರಗಳ ಖಾತೆ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ 1 ಲಕ್ಷ ರೂ.ಗಳ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 8ರಂದು ನಡೆಯಲಿದೆ.

 

Tags: