ನವದೆಹಲಿ: ನಾಳೆ ಲೋಕಸಭಾ ಸ್ಪೀಕರ್ ಆಯ್ಕೆ ಸಂಬಂಧ ಚುನಾವಣೆ ನಡೆಯಲಿದ್ದು, ಎಲ್ಲಾ ಎನ್‌ಡಿಎ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಿಜೆಪಿಯ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಕಣಕ್ಕಿಳಿಸಿದ್ದು, ಇಂಡಿಯಾ ಒಕ್ಕೂಟ ಕಾಂಗ್ರೆಸ್ ನಾಯಕ ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ.
ನಾಳೆ ಬೆಳಿಗ್ಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಎನ್‌ಡಿಎ ಗೆಲುವಿಗೆ ಸಾಕಷ್ಟು ಸಂಖ್ಯಾಬಲವಿದೆ. 18ನೇ ಲೋಕಸಭಾ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಮತ್ತು ಕಾಂಗ್ರೆಸ್‌ನ ಕೋಡಿಕುನ್ನಿಲ್ ಸುರೇಶ್ ಪರಸ್ಪರ ಮುಖಾಮುಖಿಯಾಗಲಿದ್ದಾರೆ.
ಇನ್ನೂ ನಾಳೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಎನ್‌ಡಿಎ ಸಂಸದರಿಗೆ ವಿಪ್ ಜಾರಿ ಮಾಡಲಾಗಿದ್ದು, ನಾಳೆ ಎಲ್ಲರೂ ಕಡ್ಡಾಯವಾಗಿ ಹಾಜರಾಗಲೇಬೇಕು ಎಂದು ಕಟ್ಟಾಜ್ಞೆ ಹೊರಡಿಸಲಾಗಿದೆ.
ಇನ್ನೂ ಚುನಾವಣೆ ಸಂಬಂಧ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಪಕ್ಷಗಳ ಜಂಟಿ ನಾಮನಿರ್ದೇಶಕರಾಗಿ ಕೆ.ಸುರೇಶ್ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ನಮ್ಮ ಪಕ್ಷವನ್ನು ಯಾರೂ ಕೂಡ ಸಂಪರ್ಕಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಅಸಮಾಧಾನ ಹೊರಹಾಕಿದೆ.