ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು.
ಕೆಲವು ಕಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಇನ್ನು ಕೆಲವು ಕಡೆ ಚರಂಡಿ ನೀರು ಹಾಗೂ ಮಳೆ ನೀರು ಸೇರಿ ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.