Mysore
23
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಡೆತ್‌ ನೋಟ್‌ ಬರೆದಿಟ್ಟು ಯುವಕ ಸೂಸೈಡ್

ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ದುರ್ದೈವಿ.

ತಿ.ನರಸೀಪುರದಲ್ಲಿ ರೂಂ ಮಾಡಿಕೊಂಡು ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ನನ್ನ ಕೆಲಸದಿಂದ ತೆಗೆದುಹಾಕಿದ್ದಾರೆ. ಹೀಗಾಗಿ ʻನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್ ಹಾಗೂ ಹೆಚ್.ಆರ್. ಎ.ಜಿ.ಎಂ ಅನಿಲ್ ಕಾರಣ. ಕೆಲಸದಿಂದ ಬೇಕೆಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಇವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆʼ ಎಂದು ಡೆತ್‌ ನೋಟ್‌ ಬರೆದಿಟ್ಟು ಸೂಸೈಡ್‌ ಮಾಡಿಕೊಂಡಿದ್ದಾನೆ.

ಈ ಸಂಬಂಧ ತಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!