ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ ಸ್ಥಿತಿ ಎದುರಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಯಾವ ಯಾವ ವಿಷಯಗಳನ್ನು ಇಟ್ಟುಕೊಂಡು ಹೋರಾಟ ಮುಂದುವರಿಸಲಿದೆ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ನೀಡಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಹಾಲಿನ ದರ ಏರಿಕೆ ಹಾಗೂ ರಾಜ್ಯ ಸರ್ಕಾರದ ಅವ್ಯವಹಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಈ ಎಲ್ಲಾ ಮಾಹಿತಿಗಳನ್ನು ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ರವಾನಿಸಿದ್ದೇವೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನತೆ ತೀರ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಈ ರೀತಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಏನನ್ನೂ ಮಾತನಾಡದೇ ಅಸಹಾಯಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಸ್ಲಿಂ ಮತಗಳಿಂದಲೇ ಬೀದರ್‌ನಲ್ಲಿ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ ಎಂಬ ಜಮೀರ್ ಅಹಮ್ಮದ್ ಹೇಳಿಕೆಗೆ ಕೆಂಡಾಮಂಡಲರಾದ ಅವರು, ಸಚಿವರ ಬಾಯಲ್ಲಿ ಈ ರೀತಿಯ ಹೇಳಿಕೆಯನ್ನು ನಾವು ಊಹಿಸಿರಲಿಲ್ಲ. ಜಮೀರ್ ಅಹಮ್ಮದ್ ಸಚಿವ ಸ್ಥಾನದಲ್ಲಿರಲು ನಾಲಾಯಕ್ ಎಂದು ಕಿಡಿಕಾರಿದರು.