Mysore
23
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಎಚ್‌ಡಿಕೆ ಹೆಸರಿಗೆ ಕೊಕ್;‌ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್‌ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಡಿಕೆಶಿ ವಿರುದ್ಧ ಅವರ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಲು ಒತ್ತಡ ಹಾಕಲಾಗುತ್ತಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ಮನವೊಲಿಸಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.

Tags:
error: Content is protected !!