ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಚ್.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಪ್ರಜ್ವಲ್ ರೇವಣ್ಣ, ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ಪ್ರಜ್ವಲ್ ಗೆ ಜೈಲೇ ಗತಿಯಾಗಿದೆ.