Mysore
20
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ, ಯಾವಾಗಲೂ ಜೊತೆಗಿರುತ್ತೇನೆ: ಡಿಕೆ ಶಿವಕುಮಾರ್‌

ಚನ್ನಪಟ್ಟಣ: ನನ್ನ ಮತ್ತು ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ ಯಾವಾಗಲೂ ಜೊತೆಗಿರುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು.

ಚನ್ನಪಟ್ಟಣ ತಾಲೂಕಿನ ಬೇವೂರಿನ ಶ್ರೀ ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಇಂದು(ಜೂ.26) ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ” ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಾಜಿ ಶಾಸಕರು ಯಾವುದೋ ಲೆಕ್ಕಚಾರದ ಮೇಲೆ ನಿಮ್ಮ ಹೃದಯ ಗೆದ್ದಿದ್ದರು. ಈಗ ನಾನು ನಿಮ್ಮ ಹೃದಯ ಗೆಲ್ಲಲು ಬಂದಿದ್ದೇನೆ. ಈ ಬಾರಿ ಚನ್ನಪಟ್ಟಣದಲ್ಲಿ ನಿಮಗೆ ಬೇಕಾದವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ನಮ್ಮ ಕೈ ಬಲಪಡಿಸಿ ಎಂದು ಮನವಿ ಮಾಡಿದರು.

ನಾವು ಕನಕಪುರದಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆ ಕೇಳಿ ಪರಿಹರಿಸಿದ್ದೇವೆ. ಅದನ್ನೇ ಇಲ್ಲಿ ಮಾಡುತ್ತಿದ್ದೇವೆ. ಮಾಜಿ ಶಾಸಕರಿಗೆ ಇಂತಹ ಕಾರ್ಯಕ್ರಮಗಳಲ್ಲಿ ಆಸಕ್ತಿ ಇರಲಿಲ್ಲ ಎಂದರು.

ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು ರೂ.150 ಕೋಟಿಯಿಂದ ರೂ.200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ವಿದ್ಯಾರ್ಥಿ ಗುಂಪೊಂದು ಗ್ರಾಮಕ್ಕೆ ಬಸ್‌ ವ್ಯವಸ್ಥೆ ಸರಿಯಾಗಿಲ್ಲ ಎಂದು ಅಹವಾಲು ಸಲ್ಲಿಸಿದರು. ಅದಕ್ಕೆ ಪ್ರತಿಕ್ರಿಯಿಸಿದರ ಡಿಸಿಎಂ, ಸೋಮವಾರದಿಂದ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿದಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

 

Tags: