Mysore
28
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಸಿಎಂಗೆ ಮನವಿ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಭೇಟಿ ಮಾಡಿ, ಅರ್ಜಿ ಸಲ್ಲಿಸಿದ್ದರೂ, ಅರ್ಹ ಪತ್ರಕರ್ತರ ಮಾಸಾಶನ ಮಂಜೂರು ಮಾಡಿಲ್ಲ. 3-4 ತಿಂಗಳಾದರೂ ಮಾಸಾಶನ ಇನ್ನೂ ಸಹ ಬಿಡುಗಡೆ ಆಗಿಲ್ಲ  ಎಂಬ ಇತ್ಯಾದಿ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಯಿತು.

ಇದೇ ವೇಳೆ ಜುಲೈ 1 ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ ಆವರಣದಲ್ಲಿ ಮಾಧ್ಯಮ ಅಕಾಡೆಮಿ, ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಆಯೋಜನೆ ಮಾಡಿರುವ ಪತ್ರಿಕಾ ದಿನಾಚರಣೆಗೆ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ರಾಜ್ಯ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: