Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಶಕ್ತಿ ಯೋಜನೆ ದುರುಪಯೋಗ ಮಾಡಿಕೊಂಡ್ರೆ ಕಂಡಕ್ಟರ್ ಗಳ ಮೇಲೆ ಕಠಿಣ ಕ್ರಮ

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್‌ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈಗಾಗಿ ಕೆಎಸ್​ಆರ್​ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್‌ ಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.  ಬಸ್​ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್‌ ಕೊಟ್ಟಿದ್ದಾರೆ.

ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ​​​ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.

೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ

೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ

೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ

೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ

೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.

Tags: