ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿದ್ದಾರೆ.
ಬುಧವಾರ (ಜೂನ್.26) ಭೋಪಾಲ್‌ನಲ್ಲಿರುವ ಸಿಎಂ ಸಿವಾಸದಲ್ಲಿ ಲೋಕತಂತ್ರ ಸೇನಾನಿ ಸಮ್ಮಾನ್ ಸಮಾರಂಭದಲ್ಲಿ ಜನರು ಸರ್ಕಾರದ ವಿರುದ್ಧ ಮಾಡಿದ ಪ್ರತಿಭಟನೆಗಳು, ಹೋರಾಟಗಳನ್ನು ಸ್ಮರಿಸಿದರು.
ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹೋರಾಟಗಾರರ ಫಲದಿಂದಾಗಿ ಇಂದು ದೇಶ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾರ್ಪಟ್ಟಿದೆ ಎಂದರು.
ಪ್ರಜಾಪ್ರಭುತ್ವ ಹೋರಾಟಗಾರರಿಗೆ ಸರ್ಕಾರಿ ಗೃಹಗಳಲ್ಲಿ ಶೇ.50 ರಷ್ಟು ವಿನಾಯಿತಿ ದರದಲ್ಲಿ ತಂಗಲು ಅವಕಾಶ, ಹೆದ್ದಾರಿಯಲ್ಲಿ ಟೋಲ್ ಪಾವತಿಸುವಲ್ಲಿ ವಿನಾಯಿತಿ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಚಿಕಿತ್ಸಾ ವೆಚ್ಚ ಭರಿಸಲು ವಿಳಂಬ ಮಾಡುವುದಿಲ್ಲ ಎಂದು ಹೇಳಿದರು.