ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಕಾರಣಕ್ಕೂ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ನ ನಾಯಕರು ಹಾಗೂ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಡಿಸಿಎಂ ಹುದ್ದೆ ವಿಚಾರಕ್ಕೆ ಸಂಬಂಧಪಟ್ಟಂತೆವ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆ.ಎನ್ ರಾಜಣ್ಣಗೆ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ, ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಖಡಕ್ ಸೂಚನೆ ನೀಡಿದರು..