Mysore
31
scattered clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಸಿದ್ದರಾಮಯ್ಯ ಸಮ್ಮುಖದಲ್ಲೇ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಹೇಳಿದ ಚಂದ್ರಶೇಖರನಾಥ ಸ್ವಾಮೀಜಿ

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಹೇಳಿದರು.

ಗುರುವಾರ (ಜೂನ್‌.27) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಮುಂದೆ ತಮ್ಮ ಮುಖ್ಯಮಂತ್ರಿ ಸ್ಥಾನಮಾನವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟುಕೊಡಬೇಕು. ಸಿಎಂ ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೇ ಮಾತ್ರ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲು ಸಾಧ್ಯ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಆಗಿ ಅನುಭವ ಹೊಂದಿದ್ದಾರೆ. ಮುಂದೆ ನಮ್ಮ ಸಮುದಾಯದ ಡಿಕೆ ಶಿವಕುಮಾರ್‌ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.

ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಅಕ್ಕಪಕ್ಕದಲ್ಲಿಯೇ ಕುಳಿತಿದ್ದರು ಏನು ಮಾತನಾಡದೇ ಮೌನವಾಗಿದ್ದರು.

Tags:
error: Content is protected !!