Mysore
14
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ : ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿ ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ. ವೃತ್ತಿ ಆಧಾರದ ಮೇಲೆ  ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು  ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು

Tags:
error: Content is protected !!