Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗ ಜಲಪಾತ

ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು,  ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ  ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ ಕಳೆಬಂದಿದೆ. ಭಾರೀ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದ ಸಾಗರ ತಾಲೂಕಿನ ಜೋಗ್ ಫಾಲ್ಸ್ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.

 

Tags:
error: Content is protected !!