Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸೂಕ್ಷ್ಮ ನೀರಾವರಿ ಪರಿಕರ ಪಡೆಯುವ ಮಿತಿ 5 ವರ್ಷಕ್ಕೆ ಇಳಿಕೆ ‌ಎನ್ : ಚಲುವರಾಯಸ್ವಾಮಿ

ಧಾರವಾಡ : ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸವಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ವಿವಿಧ ಕೃಷಿ ಪ್ರಾತ್ಯಕ್ಷಿಕೆ ಉದ್ಘಾಟಿಸಿ, ಫಲಾನುಭವಿಗಳಿಗೆ ಸೌಲತ್ತು ವಿತರಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಹಿಂದೆಂದಿಗಿಂತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ . ಮುಂಗಾರು ಹಂಗಾಮಿಗೆ 1700 ಕೋಟಿ ರೂ ಬೆಳೆ ವಿಮೆ ಪಾವತಿಸಲಾಗಿದೆ. ಕಳೆದ ಸಾಲಿನಲ್ಲಿ ಸುಮಾರು 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ವಿಶ್ವ ವಿದ್ಯಾನಿಲಯಗಳ ಮೂಲಕ ರೈತರಿಗೆ ಸಂಶೋದನೆ, ಮಾರ್ಗದರ್ಶನಗಳ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ವಿನಯ್ ಕುಲಕರ್ಣಿ ಕೇತ್ರದ ಬಗ್ಗೆ ಹೆಚ್ಚಿನ‌ ಕಾಳಜಿ ವಹಿಸಿದ್ದಾರೆ. ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಚಿವರ ಸಂಪರ್ಕ ಹೊಂದಿದ್ದಾರೆ ಎಂದರು‌.

Tags: