Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಹಾವೇರಿ: ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮೃತ ಮಹಿಳೆಯನ್ನು ಹಾನಗಲ್‌ ತಾಲ್ಲೂಕಿನ ನರೇಗಲ್‌ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಗೌಸಿಯಾಗೆ ಕಳೆದ ಎರಡು ದಿನಗಳಿಂದ ತೀವ್ರ ಜ್ವರವಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಿದಾಗ ಮಹಾಮಾರಿ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ. ನಂತರ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನೂ ರಾಜ್ಯದಲ್ಲಿ ಪ್ರತೀ ಶುಕ್ರವಾದ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ವಿಶೇಷ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಆದರೂ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವುದು ಜನರಲ್ಲಿ ಭಯವನ್ನುಂಟುಮಾಡಿದೆ.

ಇನ್ನೂ ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಡೆಂಗ್ಯೂ ಪರೀಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವುದು ಬೇಡ. ಹೆಚ್ಚು ಮಾಡಿದಂತೆ ಪ್ರಕರಣಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು. ಡೆಂಗ್ಯೂಗೆ ಕಾರಣವಾಗುವ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಗ್ಯೂ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಏನೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ, ಡೆಂಗ್ಯೂ ಪ್ರಕರಣ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡಬೇಕು. ಮಳೆ ನೀರು ನಿಂತುಕೊಳ್ಳುವ ಸ್ಥಳಗಳನ್ನು ಆಗಾಗ ಸ್ವಚ್ಛ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಜನತೆಗೆ ಸೂಚನೆ ನೀಡಿದೆ.

 

Tags:
error: Content is protected !!