Mysore
25
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಸಿಎಂ ಬದಲಾವಣೆ ಮಾಡುವುದೇ ಆದಲ್ಲಿ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ : ಶ್ರೀಶೈಲ ಜಗದ್ಗುರು ಆಗ್ರಹ

ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನ ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್‌ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಡಿ.ಕೆ ಶಿವಕುಮಾರ್‌ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ನಿನ್ನೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ವಿವಿಧ ಸಮುದಾಯದ ಸ್ವಾಮೀಜಿಗಳು ಸಿಎಂ ಬದಲಾವಣೆಗೆ ಬಗ್ಗೆ ಹೇಳಿಕೆಗಳನ್ನ ಕೊಡಲು ಶುರು ಮಾಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದಲ್ಲಿ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ತಾಲೂಕಿನ ಯಡೂರ ಗ್ರಾಮದಲ್ಲಿ ಈ ವಿಚಾರವಾಗಿ ಮಾತನಾಡಿದ ಶ್ರೀಶೈಲ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ಕೊಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

Tags:
error: Content is protected !!