Mysore
13
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬೆಂಗಳೂರು:  ಈ ಬಾರಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಅಧಿಕಾರಿ ಹಾಗೂ ಸಾಹಿತ್ಯ ಸಮ್ಮೇಳನದ ಪಧಾಧಿಕಾರಿಗೆ ಸೂಚಿಸಿದರು.

ಅವರು ಇಂದು(ಜೂ.28) ಬೆಂಗಳೂರಿನಲ್ಲಿ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಡಿಸೆಂಬರ್‌ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಯಾವುದೇ ಲೋಪದೋಷ ಕಂಡು ಬರದ ರೀತಿ ನೋಡಿಕೊಳ್ಳಿ, ಜೊತೆಯೆ ವಿವಿಧ ಸಮಿತಿಗಳ ರಚನೆಗೆ ಕ್ರಮಕೈಗೊಳ್ಳಿ ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ; ಹೆಚ್.ಎಲ್ ನಾಗರಾಜು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Tags:
error: Content is protected !!