Mysore
28
scattered clouds

Social Media

ಭಾನುವಾರ, 10 ನವೆಂಬರ್ 2024
Light
Dark

ಸಿಎಂ ಬದಲಾವಣೆ ಆಗಬೇಕು ಎಂಬ ಸ್ವಾಮೀಜಿ ಹೇಳಿಕೆ ಹಿಂದೆ ವಿರೋಧ ಪಕ್ಷಗಳ ಕೈವಾಡ: ಚಲುವರಾಯಸ್ವಾಮಿ ಆರೋಪ

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು ಸಿಎಂ ಆಗಬೇಕೆಂಬ ಕೂಗೆದ್ದಿದೆ. ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಹಾಗೂ ಲಿಂಗಾಯತರು ಸಿಎಂ ಆಗಬೇಕು ಎಂಬ ಶಿವಾಚಾರ್ಯ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಸ್ವಾಮೀಜಿಗಳ ಹೇಳಿಕೆ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಮಯ ಸರಿಯಿಲ್ಲ ಅನಿಸುತ್ತಿದೆ ಅಥವಾ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿವೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 17ರಲ್ಲಿ ಮಾತ್ರ ಗೆದ್ದಿದೆ. ಇದರಿಂದ ಅವರು ಸ್ವಲ್ಪ ಶೇಕ್‌ ಆಗಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಹಾಗೂ ಡಿಸಿಎಂ ನಡುವೆ ಹೊಂದಾಣಿಕೆ ತುಂಬಾ ಚೆನ್ನಾಗಿದೆ. ಹೈಕಮಾಂಡ್‌ ಅವರಿಬ್ಬರನ್ನು ಕೂರಿಸಿಕೊಂಡು ಚರ್ಚೆ ಮಾಡುತ್ತದೆ. ಹೈಕಮಾಂಡ್‌ ಯಾವಾಗ ತೀರ್ಮಾನ ಮಾಡಬೇಕೋ ಆಗ ಮಾಡುತ್ತೆ ಎಂದರು.

 

Tags: