Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ಮಹಾಬೋಧಿ ಮೈತ್ರಿ ಮಂಡಲ ಸಮುದಾಯ ಭವನ ಉದ್ಘಾಟಿಸಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ.

ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬೌದ್ಧ ಸಮುದಾಯದವರು ರಾಜ್ಯದಲ್ಲಿ ನೆಲೆಸಿರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿ ಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.2 ಕೋಟಿ ರೂ ಅನುದಾನದ ಚೆಕ್ಕನ್ನು ಸಚಿವರು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.

ಬಳಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯವಾದ ಲ್ಯಾಪ್‌ಟಾಪ್‌, ಡೆಸ್ಕ್‌ ಟಾಪ್‌ ಖರೀದಿಸಲು 2 ಲಕ್ಷ ರೂ ನೆರವನ್ನು ವೈಯಕ್ತಿಕವಾಗಿ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Tags: