ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ.
ಬಸ್‌ನಲ್ಲಿ ಸುಮಾರು 30 ಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಈ ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.