Mysore
22
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಮನೆಗೆ ಕಳಿಸಿ: ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ.

ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್‌, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶಿಸಿದೆ.

ಸರ್ಕಾರಿ ನೌಕರರ ಕೆಲಸವನ್ನು ಪರಿಶೀಲಿಸಿ ಅವರನ್ನು ಉಳಿಸಿಕೊಳ್ಳಬೇಕೆ ಅಥವಾ ಕೆಲಸದಿಂದ ತೆಗೆದುಹಾಕಬೇಕು ಎಂಬುದನ್ನು ನಿರ್ಧರಿಸಲು ಕಾರ್ಯಕ್ಷಮತೆಯ ಆವರ್ತ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಈ ನಿಟ್ಟಿನಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಿ ವರದಿಯನ್ನು ಸಲ್ಲಿಸಲು ವಿನಂತಿಸಿದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸದಿರುವ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿ, ಬೇರೆ ನೌಕರರನ್ನು ತೆಗೆದುಕೊಳ್ಳುವಂತೆ ಸಚಿವಾಲಯಕ್ಕೆ ಸೂಚನೆ ನೀಡಿದೆ.

 

Tags:
error: Content is protected !!