Mysore
25
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ದೆಹಲಿ ಸಿಎಂ ಕೇಜ್ರಿವಾಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೂರು ದಿನಗಳ ಸಿಬಿಐ ವಿಚಾರಣೆ ಇಂದು (ಜೂನ್.‌29) ಅಂತ್ಯವಾದ ಹಿನ್ನೆಲೆ, ಇಂದು ಮುಂಜಾನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು ಸಿಬಿಐ ಕಸ್ಟಡಿ ಮುಗಿದ ಬಳಿಕ ಸಿಎಂ ಕೇಜ್ರಿವಾಲ್‌ ಅವರನ್ನು ನ್ಯಾಯಾಲಕ್ಕೆ ಕರೆತರುವಂತೆ ಆದೇಶಿಸಿದ್ದರು. ಶನಿವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು ಅರವಿಂದ್‌ ಕೇಜ್ರಿವಾಲ್‌ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ತನಿಖೆ ಹಾಜರಾಗುತ್ತಿದ್ದ ಸಿಎಂ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿಯೇ ಸಿಬಿಐ ಅಧಿಕಾರಿಗಳು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದರು. “ತನಿಖೆ ಮತ್ತು ನ್ಯಾಯದ ಹಿತಾಶಕ್ತಿ”ಗಾಗಿ ಅರವಿಂದ್‌ ಕೇಜ್ರಿವಾಲರ ವಿಚಾರಣಾ ಕಸ್ಟಡಿಯ ಅಗತ್ಯವಿದೆ ಎಂದು ಹೇಳಿದ್ದರು.

Tags:
error: Content is protected !!