Mysore
18
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಎಣ್ಣೆ ಪ್ರಿಯರಿಗೆ ಬೇಸರ: ಮದ್ಯದ ದರ ಇಳಿಕೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.

ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.

ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್‌ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.

ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.

 

 

Tags:
error: Content is protected !!