Mysore
22
clear sky

Social Media

ಶುಕ್ರವಾರ, 02 ಜನವರಿ 2026
Light
Dark

ದಲ್ಲಾಳಿಗಳ ಕಾಟದಿಂದ ಬೇಸತ್ತು ವಿಷ ಸೇವಿಸಿ ನಾಲ್ವರು ರೈತರು ಆತ್ಮಹತ್ಯೆಗೆ ಯತ್ನ

ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ರುದ್ರೇಶ್‌, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ವರ್ಷ ಅಗ್ರಿಗ್ರೇಡ್‌ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿಗಳ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆಶಾರಾಣಿ, ಅಶೋಕ್‌ ಕುಮಾರ್‌, ಶಿವಮೂರ್ತಿ ಎಂಬುವವರಿಂದ ಮೆಣಸಿನಕಾಯಿ ಖರೀದಿ ಆರೋಪ ಮಾಡಲಾಗಿದೆ. 1 ಕೋಟಿ 93 ಲಕ್ಷ ರೂ ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.

ಕಳೆದ 18 ದಿನಗಳಿಂದ ಹಣ ನೀಡದೇ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದರು. ಬಾಕಿ ಹಣ ನೀಡದಿದ್ದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!