Mysore
20
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಸಂಬಂಧ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಒತ್ತಾಯ ಪೂರ್ವಕವಾಗಿ ಈ ಮೂರು ಕ್ರಿಮಿನಲ್‌ ಕಾನೂನುಗಳನ್ನು ಅಂಗೀಕರಿಸಲಾಗಿದೆ. ಇದು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ಬುಲ್ಡೋಜರ್‌ ನ್ಯಾಯ ಎಂದು ಟೀಕಿಸಿದ್ದಾರೆ.

ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ, ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದೀಯ ವ್ಯವಸ್ಥೆಯಲ್ಲಿ ಈ ಬುಲ್ಡೋಜರ್‌ ನ್ಯಾಯ ಮೇಲುಗೈ ಸಾಧಿಸಲು ಇಂಡಿಯಾ ಬಣ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

 

Tags:
error: Content is protected !!