Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಷ್ಟ್ರಪತಿ ಭಾಷಣದಲ್ಲಿ ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಖರ್ಗೆ ಅವರು, ರಾಷ್ಟ್ರಪತಿ ಭಾಷಣವನ್ನು ಸರ್ಕಾರ ರಚಿಸಿದೆ. ಸದನದಲ್ಲಿ ಜೈ ಸಂವಿಧಾನ ಘೋಷಣೆಯೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಪಕ್ಷಗಳಿವೆ.

ರಾಷ್ಟ್ರಪತಿಗಳ ಜಂಟಿ ಭಾಷಣದಲ್ಲಿ ಯಾವುದೇ ದೂರದೃಷ್ಟಿ ಮತ್ತು ನಿರ್ದೇಶನ ಇಲ್ಲ. ಬಡವರು, ದಲಿತರು ಮತ್ತು ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿ ಟೀಕಾ ಪ್ರಹಾರ ನಡೆಸಿದ ಖರ್ಗೆ ಅವರು, ವಿಪಕ್ಷಗಳು ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಅವರು ಕೇವಲ ಮನ್‌ ಕಿ ಬಾತ್‌ ಮಾಡುತ್ತಾರೆ. ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿಯ ಚುನಾವಣಾ ಸಮಯದಲ್ಲಿ ತಮ್ಮ ಭಾಷಣಗಳ ಮೂಲಕ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಮಾಡಿಲ್ಲ. ಇದಲ್ಲದೇ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆಗಳನ್ನು ಅವುಗಳ ಮೂಲ ಸ್ಥಳಗಳಿಗೆ ಮರುಸ್ಥಾಪಿಸಬೇಕು ಎಂದು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದರು.

 

Tags: